ಅಭಿಪ್ರಾಯ / ಸಲಹೆಗಳು

ಕನ್ನಡ ಪುಸ್ತಕ ನೀತಿ ಪುನರ್‌ ರಚನೆಗೆ ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ

ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಪುಸ್ತಕ ನೀತಿ ಪುನರ್‌ ರಚನೆಗೆ ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ.

ಕನ್ನಡ ಪುಸ್ತಕ ಲೋಕವು ಆಧುನಿಕ ಮಾಧ್ಯಮಗಳ ನೂತನ ಆವಿಷ್ಕಾರಗಳ ಫಲವಾಗಿ ವಿಸ್ತಾರಗೊಳ್ಳುತ್ತಿದೆ. ಹೀಗಾಗಿ, ಪುಸ್ತಕೋದ್ಯಮದ ಎಲ್ಲಾ ಸಾಧ್ಯತೆ ಮತ್ತು ಸವಾಲುಗಳನ್ನು ಹೊಸ ದೃಷ್ಠಿಕೋನದಿಂದ ನೋಡುವ ಅಗತ್ಯತೆ ಇದೆ. ಆದ್ದರಿಂದ ಕನ್ನಡ ಪುಸ್ತಕ ನೀತಿಯನ್ನು ಪುನರ್‌ ರಚಿಸಲು ನಿರ್ಧರಿಸಲಾಗಿದೆ. ಇ-ಪುಸ್ತಕ, ಆಡಿಯೋ ಪುಸ್ತಕ ಒಳಗೊಂಡಂತೆ ಆಧುನಿಕ ಪುಸ್ತಕೋದ್ಯಮದ ಸಾಧಕ-ಬಾಧಕಗಳು ಹಾಗೂ ಕನ್ನಡ ಪುಸ್ತಕ ಲೋಕದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಈ ಪುಸ್ತಕ ನೀತಿ ರಚನೆ ಆಗಬೇಕಿದೆ.ಇದಕ್ಕಾಗಿ ಕನ್ನಡ ಪುಸ್ತಕ ಪ್ರಾಧಿಕಾರವು ಹಿರಿಯ ಚಿಂತಕ, ವಿಮರ್ಶಕ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ ಇವರ ಅಧ್ಯಕ್ಷತೆಯಲ್ಲಿ ಉಪ ಸಮಿತಿಯನ್ನು ರಚಿಸಿದ್ದು, ಸಮಿತಿಯು ಅಂತಿಮ ಹಂತದ ಕರಡನ್ನು ಸಿದ್ಧಪಡಿಸುತ್ತಿದೆ.

ನಾಡಿನ ಬರಹಗಾರರು, ಚಿಂತಕರು, ಓದುಗರು, ಪ್ರಕಾಶಕರು ಹಾಗೂ ಆಸಕ್ತ ಸಾರ್ವಜನಿಕರಿಂದ ಪುಸ್ತಕ ಲೋಕಕ್ಕೆ ಸಂಬಂಧಿಸಿದಂತೆ ಅನುಷ್ಠಾನ ಮಾಡಬಹುದಾದ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳನ್ನು ಪಡೆಯಲು ಈ ಸಮಿತಿಯು ನಿರ್ಧರಿಸಿದೆ. ಆದ್ದರಿಂದ ನಾಡಿನ ಬರಹಗಾರರು, ಚಿಂತಕರು, ಓದುಗರು, ಪ್ರಕಾಶಕರು ಹಾಗೂ ಆಸಕ್ತ ಸಾರ್ವಜನಿಕರು “ಪುಸ್ತಕ ನೀತಿ”ಯಲ್ಲಿ ಅಳವಡಿಸಬೇಕಾದ ಅಂಶಗಳ ಬಗ್ಗೆ ತಮ್ಮ ಸಲಹೆ ಸೂಚನೆ ಮತ್ತು ಅಭಿಪ್ರಾಯಗಳನ್ನು ದಿನಾಂಕ:10.02.2023ರೊಳಗೆ ಅಂಚೆ ಮೂಲಕ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, 1ನೇ ಮಹಡಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560 002 ಈ ವಿಳಾಸಕ್ಕೆ ಕಳುಹಿಸಬಹುದಾಗಿದೆ.

ಇಲ್ಲವೇ ಪ್ರಾಧಿಕಾರದ ಇ-ಮೇಲ್‌ ವಿಳಾಸ kannadappradhikara@gmail.com ಮೂಲಕವೂ ಕಳುಹಿಸಬಹುದಾಗಿದೆ.

ಇತ್ತೀಚಿನ ನವೀಕರಣ​ : 30-01-2023 10:27 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕನ್ನಡ ಪುಸ್ತಕ ಪ್ರಾಧಿಕಾರ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080